ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಇಂದು ಸುವರ್ಣಾಕ್ಷರಗಳಲ್ಲಿ ಬರೆದಿಡುವಂತ ಸನ್ನಿವೇಶವಾಗಿದೆ ರಾಜ್ಯದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಅವರು ಇಂದು ಪ್ರಮಾಣವಚನ ಸ್ವೀಕರಿಸಿದರು.

ಕೋಲ್ಕತ್ತಾದ ಐತಿಹಾಸಿಕ ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ನಡೆದ ಈ ಭವ್ಯ ಸಮಾರಂಭದಲ್ಲಿ, ರಾಜ್ಯಪಾಲ ಆರ್.ಎನ್. ರವಿ ಅವರು ಸುವೇಂದು ಅಧಿಕಾರಿಯವರಿಗೆ ಪದವಿ ಮತ್ತು ಗೌಪ್ಯತೆಯ ಪ್ರಮಾಣವಚನ ಬೋಧಿಸಿದರು. ಈ ಮೂಲಕ ಅವರು ಬಂಗಾಳದ 9ನೇ ಮುಖ್ಯಮಂತ್ರಿಯಾಗಿ ಅಧಿಕಾರಕ್ಕೇರಿರುವ ಮಾಹಿತಿ ಇದೀಗ ತಿಳಿದು ಬಂದಿದೆ.