Share This News

ಸಿಡ್ನಿ: ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿ ಮುಕ್ತಾಯದ ನಂತರ, ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಭಾವನಾತ್ಮಕ ಪೋಸ್ಟ್ ಮೂಲಕ ಸಿಡ್ನಿಗೆ ವಿದಾಯ ಹೇಳಿದ್ದಾರೆ — “ಕೊನೆಯ ವಿದಾಯ ಸಿಡ್ನಿ” ಎಂದು ಬರೆದು ಅಭಿಮಾನಿಗಳ ಮನ ಗೆದ್ದಿದ್ದಾರೆ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರು ಪಂದ್ಯಗಳ ಸರಣಿಯಲ್ಲಿ ಭಾರತ 1–2 ಅಂತರದಲ್ಲಿ ಸೋತಿದ್ದರೂ, ಅಂತಿಮ ಪಂದ್ಯದಲ್ಲಿ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ತಂಡಕ್ಕೆ ಗೌರವಯುತ ಗೆಲುವು ತಂದುಕೊಟ್ಟರು.

ಇದು ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿಗೆ ಕೊನೆಯ ಆಸ್ಟ್ರೇಲಿಯಾ ಪ್ರವಾಸವಾಗಿದ್ದು, ಈ ಸರಣಿ ಇವರಿಬ್ಬರಿಗೂ ಭಾವನಾತ್ಮಕ ಕ್ಷಣವಾಗಿತ್ತು. ಪಂದ್ಯದ ನಂತರ ಮಾತನಾಡಿದ ಇಬ್ಬರೂ ಇದು ತಮ್ಮ “ಕೊನೆಯ ಆಸ್ಟ್ರೇಲಿಯಾ ಟೂರ್” ಎಂದು ದೃಢಪಡಿಸಿದ್ದರು.

ಸಿಡ್ನಿ ವಿಮಾನ ನಿಲ್ದಾಣದಲ್ಲಿ ತೆಗೆಸಿಕೊಂಡಿದ್ದ ರೋಹಿತ್ ಶರ್ಮಾ ಅವರ ಫೋಟೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳು “ಇದು ಏಕದಿನ ಕ್ರಿಕೆಟ್‌ಗೆ ವಿದಾಯದ ಸಂಕೇತವೇ?” ಎಂದು ಚರ್ಚೆ ಆರಂಭಿಸಿದ್ದಾರೆ.


Share This News