ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರಷ್ಯಾ – ಉಕ್ರೇನ್ ನಡುವೆ 3 ದಿನ ತಾತ್ಕಾಲಿಕ ಕದನ ವಿರಾಮ ಘೋಷಿಸಿದ್ದಾರೆ. ಮೇ 9ರಿಂದ 11ರವೆಗೆ ಕದನ ವಿರಾಮ ಘೋಷಿಸಿರುವುದು ಬೆಳಕಿಗೆ ಬಂದಿದೆ.
ಈ ಕುರಿತು ಟ್ರೂತ್‌ನಲ್ಲಿ ಪೋಸ್ಟ್ ಮಾಡಿರುವ ಟ್ರಂಪ್, 2ನೇ ಮಹಾಯುದ್ಧದ ಕುರಿತಂತೆ ರಷ್ಯಾದಲ್ಲಿ ವಿಜಯ ದಿನವನ್ನು ಆಚರಿಸಲಾಗುತ್ತಿದ್ದು,ಯುದ್ಧದಲ್ಲಿ ಭಾಗಿಯಾಗಿದ್ದ ಉಕ್ರೇನ್‌ನಲ್ಲಿಯೂ ಆಚರಣೆ ನಡೆಯುತ್ತಿದೆ.
ನನ್ನ ಕೋರಿಕೆಯ ಮೇರೆಗೆ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮತ್ತು ಉಕ್ರೇನಿಯನ್ ಅಧ್ಯಕ್ಷ ಝೆಲೆನ್ಸ್ಕಿ ಇಬ್ಬರೂ ಸಹ ಯುದ್ಧಕ್ಕೆ ಮೂರು ದಿನಗಳ ಕದನವಿರಾಮ ಜಾರಿ ಮಾಡಲು ಪರಸ್ಪರ ಒಪ್ಪಿಗೆ ಸೂಚಿಸಿದ್ದಾರೆ ಎಂದು ಘೋಷಿಸಲು ಸಂತಸವಾಗುತ್ತಿದೆ ಎಂದು ತಿಳಿಸಿದ್ದಾರೆ.
ಉಭಯದೇಶಗಳ ನಾಯಕರೊಂದಿಗೆ ಮಾತುಕತೆ ನಡೆಸಿದ್ದಾರೆ. ಪರಸ್ಪರ ಒಪ್ಪಿಗೆಯ ಮೇರೆಗೆ ಮೇ.9ರಿಂದ ಮೇ.11ರವರೆಗೆ 3 ದಿನ ಕದನವಿರಾಮ ಘೋಷಿಸುತ್ತಿರುವುದಾಗಿ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ
