ಕೊಯಮತ್ತೂರು: ತಮಿಳುನಾಡಿನ ಕೊಯಮತ್ತೂರಿನ ಕಣ್ಣಂಪಾಳಯಂ ಕೆರೆಯ ಬಳಿ 10 ವರ್ಷದ ಬಾಲಕಿಯೊಬ್ಬಳ ಶವ ಗಾಯಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ರಾಜ್ಯವನ್ನು ಬೆಚ್ಚಿಬೀಳಿಸಿದೆ. ಕಳೆದ ಗುರುವಾರ ಸಂಜೆಯಿಂದ ನಾಪತ್ತೆಯಾಗಿದ್ದ ಬಾಲಕಿಯನ್ನು ಅಪಹರಿಸಿ ಭೀಕರವಾಗಿ ಕೊಲೆ ಮಾಡಲಾಗಿದೆ .
ಆಟವಾಡುತ್ತಿದ್ದ ಬಾಲಕಿಯ ಅಪಹರಣ ಮತ್ತು ಕೊಲೆವರದಿಗಳ ಪ್ರಕಾರ, ಬಾಲಕಿಯು ತನ್ನ ಮನೆಯ ಸಮೀಪ ಆಟವಾಡುತ್ತಿದ್ದಾಗ ಇಬ್ಬರು ಆರೋಪಿಗಳು ಆಕೆಯನ್ನು ಅಪಹರಿಸಿದ್ದರು. ಬಾಲಕಿಯ ತಂದೆಯ ಸೋದರ ಪಳನಿಸಾಮಿ ನೀಡಿರುವ ಮಾಹಿತಿ ಪ್ರಕಾರ, ಗುರುವಾರ ಸಂಜೆ ಹತ್ತಿರದ ಅಂಗಡಿಯಿಂದ ಹಿಂದಿರುಗಿದ ನಂತರ ಬಾಲಕಿ ನಾಪತ್ತೆಯಾಗಿದ್ದಾಡು ಎಂಬ ವಿಷಯ ಕುಟುಂಬಸ್ಥರಿಗೆ ತಿಳಿದುಬಂದಿತ್ತು.
ತಕ್ಷಣವೇ ಹುಡುಕಾಟ ಆರಂಭಿಸಿದ ಕುಟುಂಬಕ್ಕೆ, ಬಾಲಕಿಯನ್ನು ಕಿಡ್ನ್ಯಾಪ್ ಮಾಡಿ ಕೊಲೆ ಮಾಡಿರುವ ಆಘಾತಕಾರಿ ಸುದ್ದಿ ಸಿಕ್ಕಿದೆ. ಪೊಲೀಸರು ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೋಹನ್ ಮತ್ತು ಕಾರ್ತಿಕ್ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಾಲಕಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಲಾಗಿದೆ ಎಂದು ಪೊಲೀಸರು ಶಂಕಿಸಿದ್ದು, ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ.
