Share This News

ಬೆಂಗಳೂರು: ರಾಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ನಿನ್ನೆ ಹಠಾತ್ ರಾಜೀನಾಮೆ ನೀಡಿದ್ದಾರೆ. ಇದರ ಬೆನ್ನಲ್ಲೇ ತೆರವಾಗಿರುವ ಸಿಎಂ ಗಾದಿಗೆ ಕೆಪಿಸಿಸಿ ಅಧ್ಯಕ್ಷ ಹಾಗೂ ಹಾಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಹೆಸರು ಅಂತಿಮಗೊಂಡಿದೆ. ನಿನ್ನೆ ನಡೆದ ಮಹತ್ವದ ‘ಬ್ರೇಕ್ ಫಾಸ್ಟ್ ಮೀಟಿಂಗ್’ನಲ್ಲಿ ಸಿದ್ದರಾಮಯ್ಯ ಅವರೇ ಖುದ್ದಾಗಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಎಂದು ಘೋಷಣೆ ಮಾಡಿದ್ದಾರೆ.

ಅಧಿಕೃತ ಘೋಷಣೆ ಹೊರಬೀಳುತ್ತಿದ್ದಂತೆ ಡಿ.ಕೆ. ಶಿವಕುಮಾರ್ ಅವರ ಪಡಸಾಲೆಯಲ್ಲಿ ಸಂಭ್ರಮ ಮನೆಮಾಡಿದ್ದು, ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮಕ್ಕೆ ಭರದ ಸಿದ್ಧತೆಗಳು ಆರಂಭವಾಗಿವೆ. ತಮ್ಮ ರಾಜಕೀಯ ಜೀವನದ ಅತ್ಯುನ್ನತ ಕ್ಷಣ ಅತ್ಯಂತ ವೈಭವ ಹಾಗೂ ಶಾಸ್ತ್ರೋಕ್ತವಾಗಿ ನೆರವೇರಿಸಲು ತೀರ್ಮಾನಿಸಿದ್ದಾರೆ.

ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲು ಸಿದ್ಧತೆ ನಡೆಸುತ್ತಿರುವ ಡಿ.ಕೆ. ಶಿವಕುಮಾರ್, ಮುಹೂರ್ತ ನಿಗದಿಗಾಗಿ ತಮ್ಮ ಆಪ್ತ ಹಾಗೂ ಪ್ರಸಿದ್ಧ ಜ್ಯೋತಿಷಿ ದ್ವಾರಕನಾಥ್ ಅವರ ಮೊರೆ ಹೋಗಿದ್ದಾರೆ. ಪರಮ ದೈವಭಕ್ತರಾಗಿರುವ ಶಿವಕುಮಾರ್, ಯಾವುದೇ ಶುಭ ಕಾರ್ಯವನ್ನು ಸೂಕ್ತ ಮುಹೂರ್ತವಿಲ್ಲದೆ ಮಾಡುವುದಿಲ್ಲ. ಹೀಗಾಗಿ, ದ್ವಾರಕನಾಥ್ ಅವರ ಜೊತೆ ಸುದೀರ್ಘ ಮಾತುಕತೆ ನಡೆಸಿದ್ದಾರೆ ಎನ್ನುವ ಮಾಹಿತಿ ತಿಳಿದು ಬಂದಿದೆ.


Share This News