ಬೆಂಗಳೂರು : ರಾಜ್ಯದಲ್ಲಿ ಗೃಹ ಬಳಕೆ ಸಿಲಿಂಡರ್ ಸಮಸ್ಯೆ ಆಗುತ್ತಿಲ್ಲ. ಆದರೆ ವಾಣಿಜ್ಯ ಸಿಲಿಂಡರ್ ಸಮಸ್ಯೆ ಆಗ್ತಿದೆ ಎಂದು ಆಹಾರ ಸಚಿವ ಕೆ.ಎಚ್ ಮುನಿಯಪ್ಪ ಹೇಳಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು,ಅಕಸ್ಮಾತ್ ಯಾರಾದ್ರೂ ಕಾಳ ಸಂತೆಯಲ್ಲಿ ಸಿಲಿಂಡರ್ ಮಾರಾಟ ಮಾಡಿದ್ರೆ ಕಠಿಣ ಕ್ರಮ ಕಗೊಳ್ಳಲಾಗುತ್ತೆ ಎಂದರು.

ಸಾರ್ವಜನಿಕರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ಆದರೆ ಹೋಟೆಲ್, ಉದ್ದಿಮೆ ಸೇರಿದಂತೆ ವಾಣಿಜ್ಯ ಚಟುವಟಿಕೆಗಳಿಗೆ ಬಳಸುವ ಸಿಲಿಂಡರ್‌ಗಳ ಪೂರೈಕೆಯಲ್ಲಿ ತುಸು ಏರುಪೇರಾಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ ಎಂದು ತಿಳಿಸಿದರು.

ಗೃಹ ಬಳಕೆಗೆ ಸಮಸ್ಯೆಯಿಲ್ಲ, ರಾಜ್ಯದ ಜನತೆಗೆ ಭರವಸೆ ನೀಡಿದ ಸಚಿವರು, ಮನೆಗಳಲ್ಲಿ ಬಳಸುವ ಅಡುಗೆ ಅನಿಲ (LPG) ಸಿಲಿಂಡರ್‌ಗಳ ವಿತರಣೆ ಸುಗಮವಾಗಿ ನಡೆಯುತ್ತಿದೆ ಎಂದು ಸೂಚಿಸಿದರು.