ಬೆಂಗಳೂರು: ತಮಿಳುನಾಡು ಕಾಂಗ್ರೆಸ್ ಶಾಸಕರು ಬೆಂಗಳೂರಿಗೆ ಬಂದ ಬಗ್ಗೆ ಹರಡಿರುವ ವದಂತಿಗಳೆಲ್ಲಾ ಸುಳ್ಳು, ಯಾವ ರೆಸಾರ್ಟ್‌ಗೂ ಬಂದಿಲ್ಲ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದರು.

ಪುದುಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ಹರಿದಾಡುತ್ತಿರುವ ಸುದ್ದಿಗಳೆಲ್ಲವೂ ಸುಳ್ಳು ಎಂದು ಸ್ಪಷ್ಟಪಡಿಸಿದರು. ಈಗಲ್ಟನ್ ರೆಸಾರ್ಟ್ ರಿಪೇರಿಗಾಗಿ ಮುಚ್ಚಿದೆ ಎಂದು ಕೇಳಿಬರುತ್ತಿರುವ ಮಾತುಗಳೆಲ್ಲಾ ಸುಳ್ಳು. ಶಾಸಕರು ಹೈದರಾಬಾದ್‌ಗೆ ಹೋಗಿದ್ದಾರೆ ಅಂತ ಟಿವಿಯಲ್ಲಿ ನೋಡಿದೆ ಅಷ್ಟೇ ಎಂದರು.

. ಪಾರ್ಟಿ ಹೈಕಮಾಂಡ್ ಈ ಬಗ್ಗೆ ನನ್ನ ಬಳಿ ಏನೂ ಚರ್ಚಿಸಿಲ್ಲ. ಹೈಕಮಾಂಡ್ ಸೂಚನೆಯಂತೆ ನಾನು ಪ್ರಚಾರಕ್ಕೆ ಮತ್ತು ಪ್ರಣಾಳಿಕೆ ಬಿಡುಗಡೆಗೆ ಹೋಗಿದ್ದೆ. ತಮಿಳುನಾಡು ಬಗ್ಗೆ ನನಗೆನೂ ಗೊತ್ತಿಲ್ಲ ಎಂದು ತಿಳಿಸಿದರು.