ತಮಿಳುನಾಡು : ನಟ ವಿಜಯ ಗೆದ್ದ ನಾಡಲ್ಲಿ ಸರ್ಕಾರ ರಚನೆ ಕಸರತ್ತು ನಡುವೆ ಭಾರೀ ಹೈಡ್ರಾಮಾವೇ ನಡೆದಿದೆ. ರಾಜ್ಯಪಾಲರ ವಿರುದ್ಧ ಟಿವಿಕೆ ಕಾರ್ಯಕರ್ತರು ಸಿಡಿದೆದ್ದಿದ್ದು, ದಳಪತಿ ವಿಜಯ್ ಬೆಂಬಲಿಗರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಲೋಕಭವನದ ಎದುರು ಟಿ ವಿ ಕೆ ಕಾರ್ಯಕರ್ತ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ ಮಾಡಿದ್ದಾನೆ. ಈ ವೇಳೆ ಟಿವಿ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ

ರಾಜ್ಯಪಾಲರ ನಿಲುವಿನಿಂದ ಅಸಮಾಧಾನಗೊಂಡಿರುವ ಟಿವಿ ಕಾರ್ಯಕರ್ತರು ದೊಡ್ಡ ಮಟ್ಟದ ಪ್ರತಿಭಟನೆಗೆ ಮುಂದಾಗಿದ್ದರು. ಈ ವೇಳೆ ರಾಜಭವನದ ಮುಂಭಾಗದಲ್ಲಿ ಹೈಡ್ರಾಮಾವೇ ನಡೆದಿದ್ದು, ದಳಪತಿ ವಿಜಯ್ ಅವರ ಬೆಂಬಲಿಗನೊಬ್ಬನ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವುದು ರಾಜ್ಯಕ್ಕೆ ನುಂಗಲಾರದ ತುತ್ತಾಗಿದೆ ಈ ಘಟನೆ ಕಂಡ ಪೊಲೀಸರು ಆತನನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ