ದಳಪತಿ ವಿಜಯ್​​ರನ್ನು ದೇವರೇ ಕಾಪಾಡಬೇಕು : ಹೆಚ್​​.ಡಿ. ಕುಮಾರಸ್ವಾಮಿ ವ್ಯಂಗ್ಯ

Share This Newsಬೆಂಗಳೂರು : ತಮಿಳುನಾಡಿನಲ್ಲಿ ಸರ್ಕಾರ ರಚನೆಗೆ ಕಸರತ್ತು ನಡೆಸುತ್ತಿರುವ ನಟ ವಿಜಯ್ ಅವರ ಹೊಸ ರಾಜಕೀಯ ಪಕ್ಷ ಮತ್ತು ಅದರ ಉಚಿತ ಯೋಜನೆಗಳ ಘೋಷಣೆ ಬಗ್ಗೆ ಮಾತನಾಡಿದ್ದಾರೆ. ಈ ವಿಚಾರವಾಗಿ ಇದೀಗ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ. ತಮಿಳುನಾಡಿನ ವಾರ್ಷಿಕ ಬಜೆಟ್ ಸುಮಾರು 3.30ರಿಂದ 3.40 ಲಕ್ಷ ಕೋಟಿ ರೂ. ಇದೆ. ಆದರೆ, ವಿಜಯ್ ಅವರ ಉಚಿತ ಯೋಜನೆಗಳಿಗೆ ಒಂದು ವರ್ಷಕ್ಕೆ ಅಂದಾಜು 6 ರಿಂದ 7 ಲಕ್ಷ ಕೋಟಿ ರೂ. ಬೇಕಾಗುತ್ತದೆ ಎಂದು ಹೇಳಿದ್ದಾರೆ ವಿಜಯ್‌ರನ್ನು ದೇವರೇ ಕಾಪಾಡಬೇಕು. ವಿಜಯ್ ಘೋಷಿಸಿರುವ ಉಚಿತ ಗ್ಯಾರಂಟಿ ಯೋಜನೆಗಳಿಗೆ ದೊಡ್ಡ ಪ್ರಮಾಣದ ಹಣದ ಬೇಕಿದೆ. ದೊಡ್ಡ ಮೊತ್ತದ ಹಣ ಅವರು ಹೇಗೆ ಹೊಂದಿಸುತ್ತಾರೆ ಎಂಬುದನ್ನು ಕಾದು ನೋಡಬೇಕು ಎಂದು ತಿಳಿಸಿದ್ದಾರೆ. Share This News