ಬೆಂಗಳೂರು: ಲವ್ ಮಾಕ್ಟೇಲ್ ಸರಣಿಯ ಮೂರನೇ ಭಾಗ ಬಾಕ್ಸ್ ಆಫೀಸ್‌ನಲ್ಲಿ ಸದ್ದು ಮಾಡುತ್ತಿದೆ. ಡಾರ್ಲಿಂಗ್ ಕೃಷ್ಣ ನಿರ್ದೇಶಿಸಿ, ನಾಯಕನಾಗಿ ನಟಿಸಿರುವ ‘ಲವ್ ಮಾಕ್ಟೇಲ್-3’ ಚಿತ್ರವು ಇಂದು ಯಶಸ್ವಿಯಾಗಿ 50 ದಿನ ಪೂರೈಸುವ ಮೂಲಕ ಮಹತ್ವದ ಹೆಜ್ಜೆ ಹಾಕಿದೆ. ಈ ಕಾರಣಕ್ಕಾಗಿ ಇದೀಗ
ಕೃಷ್ಣ ಪ್ರೇಕ್ಷಕರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

ಚಿತ್ರದ ಈ ಭರ್ಜರಿ ಗೆಲುವಿನಿಂದ ಇಡೀ ಚಿತ್ರತಂಡ ಸಂಭ್ರಮದಲ್ಲಿದೆ. ಈ ಸಂತಸವನ್ನು ಹಂಚಿಕೊಂಡಿರುವ ನಟ ಹಾಗೂ ನಿರ್ದೇಶಕ ಡಾರ್ಲಿಂಗ್ ಕೃಷ್ಣ, ಚಿತ್ರಕ್ಕೆ ಅಭೂತಪೂರ್ವ ಬೆಂಬಲ ನೀಡಿದ ಪ್ರೇಕ್ಷಕರಿಗೆ ಪ್ರೀತಿಯ ಧನ್ಯವಾದ ಅರ್ಪಿಸಿದ್ದಾರೆ. ಕೇವಲ ಲವ್ ಸ್ಟೋರಿ ಮಾತ್ರವಲ್ಲದೆ, ಭಾವನಾತ್ಮಕ ಕಥಾಹಂದರ ಹೊಂದಿದ್ದ ಈ ಸಿನಿಮಾ ಅಭಿಮಾನಿಗಳ ಮನ ಗೆಲ್ಲುವಲ್ಲಿ ಯಶಸ್ವಿಯಾಗಿದೆ.