Share This News

ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸಿಎಂ ಬದಲಾವಣೆ ವಿಚಾರ ಕೊನೆಗೂ ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕೃತ ನಿವಾಸ ಕಾವೇರಿಯಲ್ಲಿ ಸಚಿವರಿಗೆ ಉಪಹಾರ ಕೂಟ ಆಯೋಜಿಸಿದ್ರು. ಮಧ್ಯಾಹ್ನ ನಂತರ ರಾಜೀನಾಮೆ ನೀಡಲಿದ್ದಾರೆ ಎಂದು ಹೇಳಲಾಗಿದೆ. ಆದರೆ ರಾಜ್ಯಪಾಲರು ದಿಢೀರ್ ಆಗಿ ಬೆಂಗಳೂರು ತೊರೆದಿರುವುದು ಸಾಕಷ್ಟು ಕುತೂಹಲ ಮೂಡಿಸಿದೆ.

ಇತ್ತ ಡಿ.ಕೆ.ಶಿವಕುಮಾರ್​ ಸಿಎಂ ಸಿದ್ದರಾಮಯ್ಯ ಆಶೀರ್ವಾದ ಪಡೆದಿದ್ದಾರೆ.ಸಿಎಂ ಸಿದ್ದರಾಮಯ್ಯ ನಿವಾಸ ಕಾವೇರಿಯಲ್ಲಿ ಬ್ರೇಕ್​ಫಾಸ್ಟ್​ ಸಭೆ​ಗೆ ಡಿಸಿಎಂ ಡಿಕೆ ಶಿವಕುಮಾರ್ ಎಂಟ್ರಿ ಕೊಟ್ಟಿದ್ದರು. ಇದೇ ವೇಳೆ, ಸಿಎಂ ಸಿದ್ದರಾಮಯ್ಯ ಕಾಲಿಗೆ ಬಿದ್ದು ಆಶೀರ್ವಾದ ಪಡೆದರು.

ಸದ್ಯ ರಾಜ್ಯಪಾಲರು ಬೆಂಗಳೂರಿನಲ್ಲಿ ಇಲ್ಲದೇ ಇರುವುದರಿಂದ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದು ಸಾಧ್ಯವೇ? ಅವರ ಮುಂದಿರುವ ಆಯ್ಕೆಗಳೇನು ಎಂಬ ಪ್ರಶ್ನೆಗಳು ಮೂಡಿವೆ. ರಾಜ್ಯಪಾಲರು ಲೋಕಭವನದಲ್ಲಿ ಇಲ್ಲದಿದ್ದರೂ ಗವರ್ನರ್ ವಿಶೇಷ ಕಾರ್ಯದರ್ಶಿ ಬಳಿ ರಾಜೀನಾಮೆ ಪತ್ರ ನೀಡಲು ಮುಖ್ಯಮಂತ್ರಿಗೆ ಸಾಂವಿಧಾನಿಕ ಅವಕಾಶ ಇದೆ. ಆದರೆ ಅಂಗೀಕಾರವಾಗಬೇಕಿದ್ದರೆ ರಾಜ್ಯಪಾಲರು ಬಂದೇ ಆಗಬೇಕು ಮುಂದೇನಾಗುತ್ತೆ ಎನ್ನುವುದು ಕಾದುನೋಡಬೇಕಿದೆ.


Share This News