2025 ಅಕ್ಟೋಬರ್ 24ರಂದು ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಉಲ್ಲಿಂದಕೊಂಡ ಕ್ರಾಸ್ ಬಳಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ಕನಿಷ್ಠ 20 ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎಂಬ ದುಃಖದ ಸುದ್ದಿ ಬಂದಿದೆ. ಮತ್ತು ಅನೇಕರು ಗಾಯಗೊಂಡಿದ್ದಾರೆ. ಆಂಧ್ರಪ್ರದೇಶದ ಗೃಹ ಸಚಿವೆ ವಂಗಲಪುಡಿ ಅನಿತಾ ಸುದ್ದಿಗೋಷ್ಠಿ ನಡೆಸಿದ್ದಾರೆ. ಅವರು ಈ ಬೆಂಕಿ ಅಪಘಾತದ ಬಗ್ಗೆ ನಿಖರವಾದ ಮಾಹಿತಿ ನೀಡಿದ್ದಾರೆ. ಮಾಹಿತಿಯ ಮೇರೆಗೆ ಸ್ಥಳಕ್ಕೆ ತಲುಪಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಒಟ್ಟು ಪ್ರಯಾಣಿಕರ ಸಂಖ್ಯೆ 46. ಅವರಲ್ಲಿ 39 ಜನ ಹಿರಿಯ ಪ್ರಯಾಣಿಕರು, 4 ಜನ ಮಕ್ಕಳು, 2 ಚಾಲಕರು‌ ಸೇರಿ 45 ಜನರು ಬಸ್ನಲ್ಲಿದ್ದರು. ಆದರೆ, ಮಾರ್ಗ ಮಧ್ಯೆ ಓರ್ವ ಅಪರಿಚಿತ ಪ್ರಯಾಣಿಕ ಬಸ್ ಹತ್ತಿಕೊಂಡಿದ್ದ. ಹೀಗಾಗಿ, ಬಸ್ನಲ್ಲಿದ್ದ 45 ಜನರ ಗುರುತು ಪತ್ತೆಯಾಗಿದೆ. ಆದರೆ, ಉಳಿದ ಓರ್ವನ ಮಾಹಿತಿ ಸಿಕ್ಕಿಲ್ಲ. ಈ ಪೈಕಿ 18 ಹಿರಿಯ ಪ್ರಯಾಣಿಕರು, 2 ಮಕ್ಕಳು ಸೇರಿ 20 ಜನ ಸಾವನ್ನಪ್ಪಿದ್ದಾರೆ. ಘಟನೆಯ ವಿವರಗಳು: ಕಾವೇರಿ ಟ್ರಾವೆಲ್ಸ್ ಎಂಬ ಖಾಸಗಿ ಬಸ್ ಬೆಂಗಳೂರಿನಿಂದ ಹೈದರಾಬಾದ್ ಕಡೆಗೆ ತೆರಳುತ್ತಿತ್ತು. ಮುಂಜಾನೆ 1.30ರ ಸುಮಾರಿಗೆ ಬಸ್‌ ಒಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ, ಬಸ್‌ಗೆ ಬೆಂಕಿ ಹೊತ್ತಿಕೊಂಡಿತು. ಬಸ್‌ನಲ್ಲಿ 46 ಪ್ರಯಾಣಿಕರು ಇದ್ದರು. ಬೆಂಕಿ ತೀವ್ರವಾಗಿದ್ದರಿಂದ 20 ಜನರು ಸಜೀವ ದಹನವಾಗಿದ್ದು, 12 ಜನರು ತುರ್ತು ನಿರ್ಗಮನದ ಮೂಲಕ ಪಾರಾಗಿದ್ದಾರೆ. ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ತಲುಪಿದ್ದು, ಬೆಂಕಿಯನ್ನು ನಿಯಂತ್ರಣಕ್ಕೆ ತಂದರು. ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ಈ ದುರಂತವು ಸಾರ್ವಜನಿಕರಲ್ಲಿ ಆಘಾತ ಉಂಟುಮಾಡಿದ್ದು, ರಸ್ತೆ ಸುರಕ್ಷತೆ ಮತ್ತು ವಾಹನ ನಿರ್ವಹಣೆಯ ಬಗ್ಗೆ ಗಂಭೀರ ಚರ್ಚೆಗೆ ಕಾರಣವಾಗಿದೆ.

ಈ ಅಪಘಾತವು ಬೆಳಗಿನ ಜಾವ 3ರಿಂದ 3.15ರ ನಡುವೆ ಸಂಭವಿಸಿದೆ. ಬೈಕ್ ಅನ್ನು ಬಸ್ 15ರಿಂದ 20 ಮೀಟರ್‌ಗಳಷ್ಟು ದೂರಕ್ಕೆ ಎಳೆದೊಯ್ದಿದೆ. ಇದು ಕಿಡಿ ಹೊತ್ತಿಕೊಳ್ಳಲು ಕಾರಣವಾಯಿತು. ಈ ಅಪಘಾತಕ್ಕೆ ಪ್ರಾಥಮಿಕವಾಗಿ ಬೆಂಕಿ ಕಿಡಿಯೇ ಕಾರಣ.