ಬೆಂಗಳೂರಿನ ಪುಟ್ಟೇನಹಳ್ಳಿ ಪ್ರದೇಶದಲ್ಲಿ ನಡೆದ ಈ ದುರ್ಘಟನೆಯಲ್ಲಿ, ನಟಿ ಆಶಿಕಾ ರಂಗನಾಥ್ ಅವರ ಸಂಬಂಧಿ ಯುವತಿ ಅಚಲ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರಾಥಮಿಕ ತನಿಖೆಯ ಪ್ರಕಾರ, ಆಕೆಗೆ ಒಬ್ಬ ಯುವಕನಿಂದ ನಿರಂತರ ಕಿರುಕುಳ ಎದುರಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಯುವತಿ ಮನೋವೈಕಲ್ಯಕ್ಕೆ ಒಳಗಾಗಿ, ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಅಚಲ ಕೊನೆಯ ಸಂದೇಶದಲ್ಲಿ ಮಾಯಾಂಕ್ ಮೋಸದ ಬಗ್ಗೆ ಉಲ್ಲೇಖಿಸಿದ್ದಳು.
22 ವರ್ಷದ ಇಂಜಿನಿಯರಿಂಗ್ ಪದವೀಧರೆ ಅಚಲಾ ಬೆಂಗಳೂರಿನ ಪಾಂಡುರಂಗ ನಗರದಲ್ಲಿ ಸಂಬಂಧಿಕರ ಮನೆಯಲ್ಲಿ ನವೆಂಬರ್ 22 ರಂದು ಆತ್ಮಹತ್ಯೆ ಮಾಡಿಕೊಂಡಿದ್ದಳು. ಈ ಬಗ್ಗೆ ಪೊಲೀಸರು ಯಾವುದೇ ಕ್ರಮಕೈಗೊಳ್ಳದ ಹಿನ್ನೆಲೆ ಸದ್ಯ ಆಕೆಯ ಪೋಷಕರು ಯುವಕ ಹಾಗೂ ಆತನ ತಾಯಿಯ ವಿರುದ್ಧ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ದೂರಿನ ಅನ್ವಯ ಮಾಯಾಂಕ್ ಎಂಬ ಯುವಕ ಆತನ ತಾಯಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಕುಟುಂಬದವರ ದೂರು ಆಧರಿಸಿ, ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಯ ವಿರುದ್ಧ IPC ಸೆಕ್ಷನ್‌ಗಳ ಅಡಿಯಲ್ಲಿ ಕಿರುಕುಳ ಮತ್ತು ಪ್ರೇರಣೆ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ಆರೋಪಿಯನ್ನು ಬಂಧಿಸಲು ಹುಡುಕಾಟ ಆರಂಭಿಸಿದ್ದಾರೆ.
ಈ ಘಟನೆ ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆಗೆ ಕಾರಣವಾಗಿದೆ. “ಯುವತಿಯರ ಸುರಕ್ಷತೆ, ಕಿರುಕುಳ ತಡೆಗೆ ಕಾನೂನು ಕ್ರಮಗಳು ಇನ್ನಷ್ಟು ಕಠಿಣವಾಗಬೇಕು” ಎಂದು ಹಲವರು ಆಗ್ರಹಿಸುತ್ತಿದ್ದಾರೆ. ನಟಿ ಆಶಿಕಾ ರಂಗನಾಥ್ ಕುಟುಂಬಕ್ಕೆ ಸಾಂತ್ವನ ಸಂದೇಶಗಳು ಹರಿದು ಬರುತ್ತಿವೆ.
ಈ ದುರ್ಘಟನೆ ಯುವತಿಯರ ಮೇಲೆ ನಡೆಯುತ್ತಿರುವ ಕಿರುಕುಳದ ಗಂಭೀರತೆ ಹಾಗೂ ಸಮಾಜದಲ್ಲಿ ಸುರಕ್ಷತಾ ಕ್ರಮಗಳ ಅಗತ್ಯತೆವನ್ನು ಮತ್ತೊಮ್ಮೆ ನೆನಪಿಸಿದೆ. ಪೊಲೀಸರು ಪ್ರಕರಣವನ್ನು ಗಂಭೀರವಾಗಿ ತನಿಖೆ ನಡೆಸುತ್ತಿದ್ದು, ಆರೋಪಿಗೆ ಕಾನೂನುಬದ್ಧ ಶಿಕ್ಷೆ ನೀಡುವ ನಿರೀಕ್ಷೆ ವ್ಯಕ್ತವಾಗಿದೆ.
