ದಾವಣಗೆರೆ: ಚನ್ನಗಿರಿ ತಾಲೂಕಿನ ಮರಬನಹಳ್ಳಿ ಗ್ರಾಮದ ಬಳಿ ಇಂದು ಬೆಳಿಗ್ಗೆ ಸಾರಿಗೆ ಸಂಸ್ಥೆಯ ಬಸ್ಸೊಂದು ಭೀಕರ ಅಪಘಾತಕ್ಕೆ ಈಡಾಗಿದ್ದ, ಈ ಘಟನೆಯಲ್ಲಿ ಆಕ್ಸೆಲ್ ತುಂಡಾಗಿ ಸಾರಿಗೆ ಬಸ್ ಪಲ್ಟಿ ಹೊಡೆದ ಪರಿಣಾಮ ಓರ್ವ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ.

ಈ ದುರಂತದಲ್ಲಿ 50 ಪ್ರಯಾಣಿಕರಿಗೆ ಗಂಭೀರ ಗಾಯವಾಗಿದೆ. ಚಲಿಸುತ್ತಿದ್ದ ಬಸ್ಸಿನ ಆಕ್ಸೆಲ್ (Axle) ಕಟ್ ಆದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಬಸ್ ರಸ್ತೆ ಪಕ್ಕಕ್ಕೆ ಪಲ್ಟಿಯಾಗಿದೆ. ಈ ಭೀಕರ ದುರಂತದಲ್ಲಿ ಸುಮಾರು 50ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು, 20ಕ್ಕೂ ಹೆಚ್ಚು ಜನರ ಸ್ಥಿತಿ ಅತ್ಯಂತ ಗಂಭೀರವಾಗಿದೆ ಎನ್ನುವ ಮಾಹಿತಿ ಇದೀಗ ಬೆಳಕಿಗೆ ಬಂದಿದೆ

https://centurytv.in/category/%e0%b2%b5%e0%b2%bf%e0%b2%a6%e0%b3%87%e0%b2%b6