Share This News

ಉತ್ತರಕನ್ನಡ: ತಂದೆ ಕಾಲೇಜು ಶುಲ್ಕ ಪಾವತಿಸಲು ನೀಡಿದ್ದ ಹಣವನ್ನು ನಂಬಿ ಪರಿಚಯಸ್ಥನಿಗೆ ಸಾಲವಾಗಿ ನೀಡಿದ್ದ ವಿದ್ಯಾರ್ಥಿನಿಯೊಬ್ಬಳು, ಆ ಹಣ ಸಕಾಲಕ್ಕೆ ಮರಳಿ ಸಿಗದೆ, ಹಾಲ್‌ಟಿಕೆಟ್ ಕೂಡ ಕೈತಪ್ಪಿದ ಕಾರಣ ಮನನೊಂದು ಆತ್ಮಹತ್ಯೆ ಮಾಡಿಕೊಂಡಿಕೊಂಡಿದ್ದಾಳೆ ಈ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ ವಿದ್ಯಾರ್ಥಿನಿಯನ್ನು ಭಟ್ಕಳದ ಕಾಲೇಜೊಂದರಲ್ಲಿ ಬಿಸಿಎ ವ್ಯಾಸಂಗ ಮಾಡುತ್ತಿದ್ದ ಗಾಯತ್ರಿ ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಸಾರ್ವಜನಿಕರ ನೆರವಿನಿಂದ ವಿದ್ಯಾರ್ಥಿನಿಯ ಶವವನ್ನು ಬಾವಿಯಿಂದ ಹೊರತೆಗೆದು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಮಗಳ ಸಾವಿನಿಂದ ತಂದೆ-ತಾಯಿ ಮತ್ತು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಈ ಘಟನೆಗೆ ಸಂಬಂಧಿಸಿದಂತೆ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Share This News